ಪುತ್ತೂರು : ಕಾರು ಹಾಗೂ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿರುವುದು ಪತ್ತೆ ಹಚ್ಚಿರುವ ಪುತ್ತೂರು ನಗರ ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ ಎಂಬಲ್ಲಿ ನಡೆದಿದೆ.
ಆರೋಪಿಗಳಿಂದ 17,50,000 ರೂಪಾಯಿ ಮೌಲ್ಯದ ಸುಮಾರು 175 ಕೆ.ಜಿ. ಗಾಂಜಾ, ಸುಮಾರು 3,00,000 ರೂಪಾಯಿ ಮೌಲ್ಯದ ಪಿಕ್ ಅಪ್ ವಾಹನ ಹಾಗೂ ಸುಮಾರು 4,00,000 ರೂಪಾಯಿ ಮೌಲ್ಯದ ಕಾರು ಸೇರಿದಂತೆ ಒಟ್ಟು ರೂ 24,50,000/- ಸೊತ್ತುಗಳನ್ನು ವಶಕ್ಕೆ ಪಡೆದ್ದಾರೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು(26), ಮೊಹಮ್ಮದ್ ಶಫಿಕ್(31), ಖಲಂದರ್ ಶಾಫಿ(26) ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಸದರಿ ಆರೋಪಿಗಳ ಪೈಕಿ ಇಬ್ರಾಹಿಂ ಯಾನೆ ಅರ್ಷದ್ ಯಾನೆ ಅಚ್ಚು ಎಂಬಾತನ ವಿರುದ್ದ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 7 ಪ್ರಕರಣಗಳು, ಕುಂಬಳೆ ಠಾಣೆಯಲ್ಲಿ 2 ಪ್ರಕರಣ ಹಾಗೂ ಖಲಂದರ್ ಶಾಫಿ ಎಂಬಾತನ ವಿರುದ್ದ ವಿಟ್ಲ ಪೊಲೀಸ್ ಠಾಣೆಯಲ್ಲಿ 2 ಗಾಂಜಾ ಪ್ರಕರಣ ಹಾಗೂ 1 ಕೊಲೆ ಯತ್ನ ಪ್ರಕರಣ ಮತ್ತು ಕಾವೂರು ಠಾಣೆಯಲ್ಲಿ 1 ಗಾಂಜಾ ಸಾಗಾಟ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow us on Social media