ಬೆಂಗಳೂರು: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ.
ಇವರ ಬಾಮೈದನೋರ್ವ ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಈ ಕಲ್ಲು ತೂರಾಟ ನಡೆದಿದೆ.
ಶಾಸಕರ ಮನೆ ಮೇಲೆ ಕಲ್ಲುತೂರಾಟ ನಡೆದಿದ್ದಲ್ಲದೆ, ಕಚೇರಿಯ ಬಳಿ ನಿಂತಿದ್ದ ವಾಹನಗಳಿಗೂ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಸಿಕ್ಕಸಿಕ್ಕ ವಾಹನಗಳಿಗೆಲ್ಲ ಕಲ್ಲು ಹೊಡೆಯುತ್ತಿದ್ದಾರೆ. ಗಲಾಟೆ ನಡೆಯುತ್ತಿರುವ ಸ್ಥಳಕ್ಕೆ ಶಾಸಕ ಜಮೀರ್ ಅಹ್ಮದ್ ಭೇಟಿ ನೀಡಿದ್ದಾರೆ.
ಡಿ.ಜೆ.ಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಆದರೆ ದುಷ್ಕರ್ಮಿಗಳು ಪೊಲೀಸರ ವಾಹನಗಳನ್ನೂ ಧ್ವಂಸ ಮಾಡಿದ್ದಾರೆ.
Follow us on Social media