ನವದೆಹಲಿ: ಜಮ್ಮು-ಕಾಶ್ಮೀರದಿಂದ 10,000 ಸೇನಾ ಸಿಬ್ಬಂದಿಗಳನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಆರ್ಟಿಕಲ್ 370 ರದ್ದತಿ ಹಿನ್ನೆಲೆಯಲ್ಲಿ ಕಳೆದ ವರ್ಷ ಈ ಪ್ರಮಾಣದಲ್ಲಿ ಸೇನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿತ್ತು.
ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದ ನಂತರ ಕೇಂದ್ರ ಸರ್ಕಾರ ಸೇನಾ ಸಿಬ್ಬಂದಿಗಳನ್ನು ಹಿಂಪಡೆಯುವುದಕ್ಕೆ ಆದೇಶ ನೀಡಿದೆ.
ಮೇ ತಿಂಗಳಲ್ಲಿ ಕೇಂದ್ರಾಡಳಿತ ಪ್ರದೇಶದಿಂದ 10 ಸಿಎಪಿಎಫ್ ಕಂಪನಿಗಳನ್ನು ಹಿಂಪಡೆಯಲು ಆದೇಶ ನೀಡಿತ್ತು. ಕಳೆದ ಡಿಸೆಂಬರ್ ನಲ್ಲಿ ಇಂತಹ 72 ಯುನಿಟ್ ಗಳನ್ನು ಹಿಂಪಡೆಯಲಾಗಿತ್ತು.
Follow us on Social media