ಬೆಂಗಳೂರು : ಯಾವ ದೇಶದ ಹಿತದೃಷ್ಟಿಯಿಂದ ನಿಮ್ಮ ಯಜಮಾನ ರಾಹುಲ್ ಗಾಂಧಿಯವರು ಕಾಂಗ್ರೆಸ್ ಅಧ್ಯಕ್ಷರಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಟಾಂಗ್ ನೀಡಿದ್ದಾರೆ.
ಕಾಂಗ್ರೆಸ್‌ನಲ್ಲಿ ನಾಯಕತ್ವ ಬಿಕ್ಕಟ್ಟು ಎದ್ದಿದ್ದು ಭಾನುವಾರ ಈ ಬಗ್ಗೆ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯನವರು ”ದೇಶದ ಹಿತದೃಷ್ಟಿಯಿಂದ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಬೇಕೆಂಬುದು ನಮ್ಮೆಲ್ಲರ ಆಶಯವಾಗಿದೆ” ಎಂದು ಹೇಳಿದ್ದರು.
ಇದೀಗ ಸಿದ್ದರಾಮಯ್ಯನವರ ಟ್ವೀಟ್‌ಗೆ ತಿರುಗೇಟು ನೀಡಿರುವ ಸಿ. ಟಿ. ರವಿಯವರು, ”ಯಾವ ದೇಶದ ಹಿತದೃಷ್ಟಿಯಿಂದ ನಿಮ್ಮ ಯಜಮಾನ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ವಹಿಸಬೇಕು, ಸನ್ಮಾನ್ಯ ಸಿದ್ದರಾಮಯ್ಯ ಅವರೆ?” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದು, ”ದಯಮಾಡಿ ಸ್ಪಷ್ಟಪಡಿಸಿ. ಯಾಕೆಂದರೆ ನಿಮ್ಮ ಯಜಮಾನರು ಭಾರತ ಬಿಟ್ಟು ಬೇರೆ ಬೇರೆ ದೇಶಗಳಲ್ಲಿಯೇ ಹೆಚ್ಚು ಸಮಯ ಕಳೆಯುತ್ತಾರೆ” ಎಂದು ಲೇವಡಿ ಮಾಡಿದ್ದಾರೆ.
Follow us on Social media