ಬೆಂಗಳೂರು: ಪ್ರವಾಹ ಹಾಗೂ ರಾಜ್ಯಕ್ಕೆ ಎದುರಾದ ನಷ್ಟಗಳ ಕುರಿತು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರ್ನಾಟವನ್ನು ಮಾತ್ರ ನಿರ್ಲಕ್ಷಿಸುತ್ತಿದ್ದಾರೆಂದು ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಕಿಡಿಕಾರಿದ್ದಾರೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಜ್ಞಾನಭಾರತಿ ವಾರ್ಡ್‌ನಲ್ಲಿ ಜೆಡಿಎಸ್ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಪ್ರವಾಹ ವಿಚಾರದಲ್ಲಿ ಪ್ರಧಾನಿ ಮೋದಿ ರಾಜ್ಯವನ್ನು ನಿರ್ಲಕ್ಷಿಸುತ್ತಿದ್ದಾರೆ. ಇದು ರಾಜ್ಯದ ಜನತೆಗೆ ಪ್ರಧಾನಿ ಮೋದಿಯವರು ಮಾಡುತ್ತಿರುವ ಅವಮಾನ. ಜನರ ಸಮಸ್ಯೆಗಳಿಗೆ ಹೆಚ್ಚು ಗಮನಕೊಡದ ಕಂದಾಯ ಸಚಿವ ಆರ್.ಅಶೋಕ್ ಅವರು ಪ್ರವಾಹಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದಾರೆ.
ಪ್ರವಾಹ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರಿಗೆ ಮತ್ತೊಮ್ಮೆ ಪತ್ರ ಬರೆಯಬೇಕಿದೆ. ರಾಜ್ಯದಿಂದ ಒಟ್ಟು 25 ಸಂಸದರಿದ್ದಾರೆ. ಆದರೂ ಕೇಂದ್ರ ಸರ್ಕಾರ, ಪ್ರಧಾನಿ ಮೋದಿಯವರು ರಾಜ್ಯವನ್ನು ಪರಿಗಣಿಸುತ್ತಿರುವ ಪರಿಯನ್ನು ನೋಡಿದರೆ, ನಮ್ಮ ರಾಜ್ಯ ಸಂದಸರು ತಾವು ಜನರಿಗೆ ಏನನ್ನು ಮಾಡುತ್ತಿದ್ದಾರೆಂಬುದರ ಕುರಿತು ತಮ್ಮನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.
Follow us on Social media