Breaking News

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ನೇಮಕ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಕನ್ನಡ ಸಂಸದ ನಳೀನ್​ಕುಮಾರ್​ ಕಟೀಲ್​ ನೇಮಕಗೊಂಡಿದ್ದಾರೆ.

ಇಂದು ಬೆಳಗ್ಗೆ ಸಚಿವ ಸಂಪುಟ ರಚನೆಯಾಗಿದ್ದು 17 ಜನರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬಾರಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಒಲಿಯಲಿದೆ ಎಂಬ ಕುತೂಹಲ ಇತ್ತು.ಇದೀಗ ನಳೀನ್​ಕುಮಾರ್​ ಕಟೀಲ್ ಅವರನ್ನು ಇಂದಿನಿಂದಲೇ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಅವರು ಆದೇಶ ಹೊರಡಿಸಿದ್ದಾರೆ.ಕಳೆದ ಬಾರಿ ರಾಜ್ಯಾಧ್ಯಕ್ಷರಾಗಿದ್ದ ಬಿ.ಎಸ್​.ಯಡಿಯೂರಪ್ಪ ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಮರ್ಥವಾಗಿ ಕಾರ್ಯ ನಿಭಾಯಿಸಿದ್ದರು. ಇದೀಗ ಆ ಜವಾಬ್ದಾರಿ ನಳೀನ್​ ಕುಮಾರ್​ ಅವರ ಹೆಗಲಿಗೇರಿದೆ.ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ರಚನೆ ಮಾಡಿದ ಬಳಿಕ ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಗೇರಿದರು. ಅದಾದ ನಂತರ ಬಿ.ಎಸ್​.ಯಡಿಯೂರಪ್ಪನವರು ನಿಭಾಯಿಸಿದ್ದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬೇರೊಬ್ಬರನ್ನು ನೇಮಕ ಮಾಡಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿತ್ತು.ಸಚಿವ ಸಂಪುಟ ರಚನೆಯಾಗುವುದಕ್ಕೂ ಮೊದಲು ಬಿಜೆಪಿ ರಾಜ್ಯಾಧ್ಯಕ್ಷರ ರೇಸ್​ನಲ್ಲಿ ಅರವಿಂದ್​ ಲಿಂಬಾವಳಿ, ಶೋಭಾ ಕರಂದ್ಲಾಜೆ, ಸಿ.ಟಿ.ರವಿ, ಆರ್​.ಅಶೋಕ್​ ಹೆಸರುಗಳೂ ಇದ್ದವು. ಇದೀಗ ಹೈಕಮಾಂಡ್​ ನಳೀನ್​ಕುಮಾರ್​ ಕಟೀಲ್​ ಅವರನ್ನು ನೇಮಕ ಮಾಡಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×