ಬೆಂಗಳೂರು: ರಾಜ್ಯದಲ್ಲಿ ವೀರಶೈವ ಲಿಂಗಾಯತ ಜನಾಂಗದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸಮಗ್ರ ಅಭಿವೃದ್ದಿಗಾಗಿ ನಿಗಮ ಸ್ಥಾಪಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಆರಂಭಿಕವಾಗಿ 500 ಕೋಟಿ ರೂ. ಅನುದಾನ ಒದಗಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮವನ್ನು ಕಂಪನಿ ಕಾಯ್ದೆ 2013ರ ಸೆಕ್ಷನ್ 7 ಅನ್ವಯ ನೊಂದಾಯಿಸಿ ಸ್ಥಾಪಿಸಲು ಆದೇಶಿಸಲಾಗಿದೆ.
ಸರ್ಕಾರದ ಅನುಮೋದನೆ ಪಡೆದು ಕಾರ್ಪುರೇಟ್ ಅಫೇರ್ಸ್ ನಲ್ಲಿ ನೋಂದಾಯಿಸಿ ಕಾರ್ಯನಿರ್ವಹಿಸಲು ವ್ಯವಸ್ಥಾಪಕ ನಿರ್ದೇಶಕ ಹುದ್ದೆ ಸೃಜನೆ ಮಾಡಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೂಚನೆ ನೀಡಲಾಗಿದೆ.
ನಿಗಮ ಸ್ಥಾಪನೆಗೆ ಪ್ರಾರಂಭಿಕ ವೆಚ್ಚವನ್ನು ಆಯುಕ್ತರು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅವರು ಭರಿಸಿ ನಂತರ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದಿಂದ ಮರು ಭರಣ ಮಾಡಲು ಸರ್ಕಾರ ಆದೇಶ ಹೊರಡಿಸಿದೆ.
Follow us on Social media