ಬೆಂಗಳೂರು: ಯುವತಿಯೊಂದಿಗೆ ರಾಸಲೀಲೆ ವಿಡಿಯೋ ಕುರಿತಂತೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ವಿಡಿಯೋದಲ್ಲಿರುವ ಯುವತಿ ಯಾರು ಎಂಬುದೇ ಗೊತ್ತಿಲ್ಲ. ಇದೆಲ್ಲಾ ಷಡ್ಯಂತ್ರ. ಇದರ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಹೇಳಿದ್ದಾರೆ.
ಜಾರಕಿಹೊಳಿ ಅವರದ್ದು ಎನ್ನಲಾದ ಸೆಕ್ಸ್ ಸಿಡಿ ಪ್ರಕರಣ ಕುರಿತಂತೆ ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡಿರುವ ಜಾರಕಿಹೊಳಿ, ನಾನು ಅತ್ಯಂತ ಸೂಕ್ಷ್ಮ ಮನಸ್ಥಿತಿಯ ಮನುಷ್ಯ. ಧಾರ್ಮಿಕವಾಗಿ ನಂಬಿಕೆಯುಳ್ಳವನು. ನಮ್ಮದು ಅತ್ಯಂತ ದೊಡ್ಡ ಕುಟುಂಬ. ಕಳೆದ 21 ವರ್ಷದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಸಿಡಿ ಹಿಂದೆ ಯಾರದೋ ಕೈವಾಡವಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಫೋನ್ ಮಾಡಿ ಮನವಿ ಮಾಡಿರುವುದಾಗಿ ತಿಳಿಸಿದರು.
ನಾನು ತಪ್ಪೇ ಮಾಡಿಲ್ಲ. ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ನಾವು ಯಾವುದಕ್ಕೂ ಹೆದರೋದಿಲ್ಲ, ಸತ್ಯ ಗೊತ್ತಾಗುತ್ತದೆ. ಒಂದು ವೇಳೆ ತಾನು ತಪಿತಸ್ಥ ಎಂಬುದು ತನಿಖೆಯಿಂದ ತಿಳಿದುಬಂದರೆ, ಸಚಿವ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದು ಜಾರಕಿಹೊಳಿ ಹೇಳಿದರು.
Follow us on Social media