ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಹೆಚ್ಚುತ್ತಿದ್ದು, ಮಂಗಳವಾರ ಬರೋಬ್ಬರಿ 6150 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 10,26,584ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 39 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,6961ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಇಂದು 4266 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,55,025ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 26 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 3487 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,68,762ಕ್ಕೆ ಏರಿಕೆಯಾಗಿದೆ. ಇನ್ನು 45107 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 351 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Follow us on Social media