ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಏಪ್ರಿಲ್ 14ರಿಂದ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಗೋಲ್ಪೋಖರ್ ಮತ್ತು ಮತಿಗರ-ನಕ್ಸಲ್ಬಾರಿಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ನಾಲ್ಕು ಹಂತದ ಮತದಾನ ಮುಗಿದ ನಂತರ ಮಾಜಿ ಕಾಂಗ್ರೆಸ್ ಅಧ್ಯಕ್ಷರು ಪ್ರಚಾರವನ್ನು ಆರಂಭಿಸಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಎಡಪಕ್ಷಗಳ ಜೊತೆಗಿನ ಮೈತ್ರಿಯೊಂದಿಗೆ 92 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಿದೆ.
ಈ ಮಧ್ಯೆ ಏಪ್ರಿಲ್ 17ಕ್ಕೆ ನಡೆಯಲಿರುವ ಚುನಾವಣೆಯಲ್ಲಿ 45 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 22 ರಂದು 43 ಸ್ಥಾನಗಳಿಗೆ ಆರನೇ ಹಂತ ಹಾಗೂ ಏಪ್ರಿಲ್ 26 ರಂದು 35 ಕ್ಷೇತ್ರಗಳಲ್ಲಿ ಏಳನೇ ಹಂತದ ಚುನಾವಣೆ ನಡೆಯಲಿದೆ.
ಏಪ್ರಿಲ್ 29 ರಂದು ಅಂತಿಮ ಹಾಗೂ ಎಂಟನೇ ಸುತ್ತಿನ ಮತದಾನ ನಡೆಯಲಿದ್ದು, ಉಳಿಯಲಿರುವ 35 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.
Follow us on Social media