ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ದ್ವಿತೀಯ ಪಿಯುಸಿ ಪರೀಕ್ಷೆ ಬುಧವಾರದಿಂದ ಪ್ರಾರಂಭವಾಗಲಿದೆ. ಪರೀಕ್ಷೆಗೆ ಪಿಯು ಬೋರ್ಡ್ ಸಕಲ ಸಿದ್ಧತೆ ಮುಗಿಸಿದ್ದು, ಪರೀಕ್ಷೆಗೆ ಸ್ಕ್ವಾಡ್‍ನ ಹದ್ದಿನ ಕಣ್ಣಿಡಲಾಗಿದೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆ ಮುಕ್ತಾಯ ಮಾಡಿದ್ದು, ನಾಳೆಯಿಂದ ಮಾರ್ಚ್ 23ರವರೆಗೆ ಪರೀಕ್ಷೆಗಳು ನಡೆಯಲಿದೆ. ಮೊದಲ ದಿನವಾದ ನಾಳೆ ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಗಣಿತ ವಿಷಯದ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪ್ರವೇಶ ಪತ್ರ ತೋರಿಸಿದರೆ ಬಸ್‍ಗಳಲ್ಲಿ ಉಚಿತ ಸಂಚಾರ ಸಿಗಲಿದೆ.
ಈ ಬಾರಿ ಒಟ್ಟು 6 ಲಕ್ಷದ 80 ಸಾವಿರದ 49 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 3 ಲಕ್ಷದ 38 ಸಾವಿರದ 431 ವಿದ್ಯಾರ್ಥಿಗಳು ಹಾಗೂ 3 ಲಕ್ಷದ 41 ಸಾವಿರದ 618 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯಾದ್ಯಂತ 1016 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳಿಗೆ ಬಿಗಿ ಭದ್ರತೆ ಮಾಡಲಾಗಿದ್ದು, ಅಕ್ರಮ ನಡೆಯದಂತೆ ಕ್ರಮವಹಿಸಲಾಗಿದೆ. ಅಕ್ರಮ ತಡೆಗೆ ಸ್ಕ್ವಾಡ್‍ಗಳನ್ನ ನೇಮಿಸಲಾಗಿದೆ. ಎಲ್ಲಾ ಕೇಂದ್ರಗಳಿಗೂ ಸಿಸಿಟಿವಿ ಹಾಕಿ ಹದ್ದಿನ ಕಣ್ಣು ಇಡಲಾಗಿದೆ. ಪ್ರತಿ ಕೇಂದ್ರಗಳಿಗೆ ಸಿಟ್ಟಿಂಗ್ ಸ್ಕ್ಯಾಡ್, ಫ್ಲೈಯಿಂಗ್ ಸ್ಕ್ಯಾಡ್ ನೇಮಿಸಲಾಗಿದೆ. ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸ್ಕ್ಯಾಡ್ ಗಳನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
Follow us on Social media