ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲುಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ನಳೀನ್ ಕುಮಾರ್ ಕಟೀಲ್ ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ನಳೀನ್ ಕುಮಾರ್ ಕಟೀಲ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಈ ಹಿಂದೆ ಸಚಿವ ಆರ್. ಅಶೋಕ್, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರಿಗೂ ಸೋಂಕು ದೃಢಪಟ್ಟಿದೆ.
Follow us on Social media