ಮಂಗಳೂರು : ಯುವಕನೊಬ್ಬ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಶರಣಾದ ಘಟನೆ ಸೋಮವಾರ ಜನವರಿ 10 ರಂದು ನಡೆದಿದೆ. ಕಿನ್ನಿಗೋಳಿ ಪಕ್ಷಿಕೆರೆ ನಿವಾಸಿ ದಿ. ದಿನೇಶ್ ಎಂಬವರ ಪುತ್ರ ಸುಶಾಂತ್ (26) ಎಂದು ಗುರುತಿಸಲಾಗಿದೆ.
ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಳಾಯಿಯಲ್ಲಿರುವ ಸನ್‌ರೈಸ್ ಕಾರ್ಪೊರೇಷನ್ ಕಚೇರಿಯಲ್ಲಿ ಸುಶಾಂತ್ ಕೆಲಸ ಮಾಡುತ್ತಿದ್ದು, ಅಲ್ಲಿ ಶಾಲನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ಹೆತ್ತವರು 15 ವರ್ಷಗಳ ಹಿಂದೆ ಮೃತಪಟ್ಟಿದ್ದು, ಅವರು ಹಿರಿಯ ಸಹೋದರ ಅಶ್ವಿತ್ ಅವರನ್ನು ಅಗಲಿದ್ದಾರೆ.
- ಹಣಕಾಸಿನ ಮುಗ್ಗಟ್ಟು ಎದುರಿಸುತ್ತಿದ್ದು, ಸಾಲದಿಂದ ಈ ಕೃತ್ಯ ಎಸಗುತ್ತಿರುವುದಾಗಿ ಸುಶಾಂತ್ ಬರೆದಿದ್ದೆನ್ನಲಾದ ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
- ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821