ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ಶುಕ್ರವಾರ ರಾತ್ರಿ ನಡೆದ 2022 ಐಪಿಎಲ್ ಪಂದ್ಯದಲ್ಲಿ ಜೋಸ್ ಬಟ್ಲರ್ ಅವರ ಆಕರ್ಷಕ ಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 15 ರನ್ ಗಳಿಂದ ರೋಚಕ ಗೆಲುವು ದಾಖಲಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 222 ರನ್ ಕಲೆಹಾಕಿತು. ರಾಜಸ್ಥಾನ ರಾಯಲ್ಸ್ ಪರ ಜೋಸ್ ಬಟ್ಲರ್ 65 ಎಸೆತಗಳಲ್ಲಿ 116 ರನ್ ಸಿಡಿಸಿದರೆ ದೇವದತ್ ಪಡಿಕ್ಕಲ್ 54 ಮತ್ತು ಸಂಜು ಸ್ಯಾಮ್ಸನ್ 46 ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ ಮುಸ್ತಫಿಜುರ್ ರಹಮಾನ್ , ಖಲೀಲ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದರು.
ರಾಜಸ್ಥಾನ ರಾಯಲ್ಸ್ ತಂಡ ನೀಡಿದ 223 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿತು. ಪರಿಣಾಮ 15 ರನ್ ಗಳಿಂದ ರಾಜಸ್ಥಾನ ರಾಯಲ್ಸ್ ತಂಡ ಗೆಲುವು ಸಾಧಿಸಿತು. ಡೆಲ್ಲಿ ಕ್ಯಾಪಿಟಲ್ಸ್ ಪರ ರಿಷಭ್ ಪಂತ್ 44, ಲಲಿತ್ ಯಾದವ್ 37 ಮತ್ತು ಪೃಥ್ವಿ ಶಾ 37 ರನ್ ಗಳಿಸಿದರು. ರಾಜಸ್ಥಾನ ರಾಯಲ್ಸ್ ಪರ ಪ್ರಸಿದ್ಧ್ ಕೃಷ್ಣ 3, ಆರ್ ಅಶ್ವಿನ್ 2 ಹಾಗೂ ಯಜ್ವೇಂದ್ರ ಚಹಾಲ್ 1 ವಿಕೆಟ್ ಗಳಿಸಿದರು.
Follow us on Social media