ಉಡುಪಿ : ಕರಾವಳಿ ಜಿಲ್ಲೆಗಳಿಗೆ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಸೂಚನೆ ನೀಡಿದ್ದಾರೆ.
ಈ ಕುರಿತು ಆದೇಶ ಹೊರಡಿಸಿರುವ ಅವರು, ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆಯನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ನೀಡಿದ್ದು, ಮೇ 17 ಮತ್ತು ಮೇ 19 ಆರೆಂಜ್ ಅಲರ್ಟ್ ಹಾಗೂ ಮೇ 18 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಇನ್ನು ಗುರುವಾರ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ನದಿ, ಸಮುದ್ರ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
Follow us on Social media