ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ.
ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ನಿನ್ನೆ ಹತ್ತನೇ ತರಗತಿ ಫಲಿತಾಂಶ ಪ್ರಕಟಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಇದೇ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದ್ದು, ಜೂನ್ 16ರೊಳಗೆ ಮೌಲ್ಯಮಾಪನ ಮುಗಿಯಲಿದೆ. ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದರು.
ಮೌಲ್ಯಮಾಪಕರ ಸಂಭಾವನೆ ಹೆಚ್ಚಿಸುವ ಪ್ರಸ್ತಾವನೆಯನ್ನು ಹಣಕಾಸು ಇಲಾಖೆಗೆ ಕಳುಹಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
Follow us on Social media