ಬಂಟ್ವಾಳ : ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಗಿರೀಶ್ ಮಾರ್ನಬೈಲು ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ವ್ಯಕ್ತಿಯಾಗಿದ್ದಾರೆ. ಗಿರೀಶ್ ಅವರು ಪ್ಲಂಬರ್ ಕೆಲಸಗಾರನಾಗಿದ್ದು, ಇಂದು ಬೆಳಿಗ್ಗೆ ತನ್ನ ದ್ವೀಚಕ್ರದಲ್ಲಿ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಕಲ್ಲಡ್ಕ ಕಡೆಯಿಂದ ಮಾಣಿ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಅತೀ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಬೈಕ್ ಸವಾರನ ಎರಡು ಕಾಲು ಹಾಗೂ ಕೈಗಳಿಗೆ ಗಂಭೀರವಾಗಿ ಗಾಯಗೊಂಡಿದ್ದು ಆತ ತೀವ್ರ ನಿಗಾ ಘಟಕ ದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.ಕಾರು ಡಿಕ್ಕಿಯಾದ ರಭಸಕ್ಕೆ ರಸ್ತೆ ಬದಿಯ ಕಾಮರಿಗೆ ಉರುಳಿ ಬಿದ್ದಿದೆ. ಕಾರಿನಲ್ಲಿದ್ದ ವ್ಯಕ್ತಿಗಳು ಯಾವುದೇ ಪ್ರಾಣಾಪಾಯ ವಿಲ್ಲದೆ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್. ಐ.ಮೂರ್ತಿ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow us on Social media