ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಇನ್ನು 2 ದಿನಗಳು ಮಾತ್ರ ಇದೆ. ಈ ನಡುವೆ ರಾಜ್ಯಸಭೆ ಚುನಾವಣಾ ಕಣದಿಂದ ತಮ್ಮ ಪಕ್ಷದ ಅಭ್ಯರ್ಥಿಯನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಜೆಪಿ ನಗರದಲ್ಲಿ ಇಂದು ತಮ್ಮ ಮೊಮ್ಮಗನ ನಾಮಕರಣ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಅವರು ಮಾಧ್ಯಮಗಳ ಜೊತೆ ಮಾತನಾಡಿ , ನಾವು ಕಾಂಗ್ರೆಸ್ ನವರು ಹೇಳಿದಕ್ಕೆಲ್ಲಾ ಒಪ್ಪಿಕೊಳ್ಳಬೇಕಾ?. ನಾವು 32 ಮಂದಿ ಶಾಸಕರು ಇದ್ದೇವೆ. ಕಾಂಗ್ರೆಸ್ ನವರು 25 ಶಾಸಕರಿದ್ದಾರೆ. ಯಾರ ಬಳಿ ಹೆಚ್ಚು ಮತಗಳು ಇವೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇವರ ದಬ್ಬಾಳಿಕೆಗೆಲ್ಲಾ ನಾವು ಬಗ್ಗಲು ಆಗುತ್ತಾ? ಎಂದು ಖಡಕ್ ಆಗಿ ಪ್ರಶ್ನಿಸಿದ್ದಾರೆಯಾವ ಪ್ರಯತ್ನವನ್ನು ಮಾಡದೇ ಈಗ ಅಭ್ಯರ್ಥಿಯನ್ನು ವಾಪಸ್ ತೆಗೆದುಕೊಳ್ಳಲಿ ಅಂತಾ ಹೇಳುವುದು ಭಂಡತನ. ನಾವೇನು ಇವರ ಗುಲಾಮರಾ? ಎಂದು ಕಿಡಿಕಾರಿದ ಅವರು, ಕಾಂಗ್ರೆಸ್ ಗೆ ಹೋದ ಬಳಿಕ ನಮ್ಮ ಪಕ್ಷದ ಅಭ್ಯರ್ಥಿ ಗೆಲ್ಲಲು ಎಷ್ಟು ಬಾರಿ ಬೆಂಬಲ ಕೊಟ್ಟಿದ್ದಾರೆ ಎಂದು ಕೇಳಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿಗಳು ತೀವ್ರ ವಾಗ್ದಾಳಿ ನಡೆಸಿದ್ದಾರೆ
Follow us on Social media