ಮೈಸೂರು : ಅನಾರೋಗ್ಯ ಹಿನ್ನಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬುಧವಾರ ಬೆಳಿಗ್ಗೆ 4 ಗಂಟೆಗೆ ದರ್ಶನ್ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ.
ಗ್ಯಾಸ್ಟ್ರಿಕ್ ಪರಿಣಾಮ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ದರ್ಶನ್, ಒಂದು ದಿನದ ಮಟ್ಟಿಗೆ ಆಸ್ಪತ್ರೆಗೆ ಸೇರಿದ್ದಾರೆ.