ಮಂಗಳೂರು: ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2022-23ನೇ ಸಾಲಿಗೆ ಹೊಸ ವಿದ್ಯಾರ್ಥಿಗಳ ಭರ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ ಹಾಗೂ ವರ್ಗದ ವಿದ್ಯಾರ್ಥಿಗಳು ವೆಬ್‍ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು.
ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ವಿವರ ಇದು:
ಕೊಡಿಯಾಲ್ ಬೈಲ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ಮೂಡಬಿದ್ರೆಯ ಲಾಡಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ,
ಮಂಗಳೂರಿನ ಕದ್ರಿಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಬಜ್ಪೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಮೊ:9480843114 ಗೆ ಕರೆ ಮಾಡಬಹುದು. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಸಿಕ್ ಛೆಂಬರ್ಸ್,
3ನೇ ಮಹಡಿ, ಮಾರ್ಕೆಟ್ ರಸ್ತೆ, ಮಂಗಳೂರು, ಈ ಕಚೇರಿಗೆ ದಾಖಲಾತಿಗಳನ್ನು ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆ ತಿಳಿಸಿದ್ದಾರೆ.
Follow us on Social media