ಬೆಂಗಳೂರು: ಬಹು ನಿರೀಕ್ಷಿತ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ 61.88% ಫಲಿತಾಂಶ ಬಂದಿದ್ದು 5,99,794 ಪೈಕಿ 4,02,697 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಈ ಬಾರಿ ಹೆಚ್ಚು ವಿದ್ಯಾರ್ಥಿಗಳು ಪಾಸ್ ಆಗಿದ್ದು ಪ್ರತಿಬಾರಿಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಂಚಿವ ಬಿ.ಸಿ ನಾಗೇಶ್ ಅವರು ಬೆಂಗಳೂರಿನ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.
ಈ ಬಾರಿ ಗ್ರಾಮಾಂತರ ಪ್ರದೇಶದಲ್ಲಿ ಉತ್ತಮ ಫಲಿತಾಂಶ ಬಂದಿದೆ. ನಗರ ಪ್ರದೇಶಗಳಲ್ಲಿ 6.178 ರಷ್ಟು ಫಲಿತಾಂಶ ಬಂದರೆ, ಗ್ರಾಮಾಂತರ ಪ್ರದೇಶದಲ್ಲಿ 62.18 ರಷ್ಟು ಫಲಿತಾಂಶ ಬಂದಿದೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಟಾಪ್ ಸ್ಥಾನ ಪಡೆದುಕೊಂಡಿದೆ.
ಕಲಾ ವಿಭಾಗದಲ್ಲಿ ಶೇ.48.71, ವಾಣಿಜ್ಯ ವಿಭಾಗದಲ್ಲಿ ಶೇ.64.97, ವಿಜ್ಞಾನ ವಿಭಾಗದಲ್ಲಿ ಶೇ.72.53 ಬಂದಿದೆ. 2021-22 ನೇ ಸಾಲಿನ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಒಟ್ಟು 6,84,255 ವಿದ್ಯಾರ್ಥಿಗಳು ನೋಂದಾವಣೆ ಮಾಡಿಕೊಂಡಿದ್ದರು. ರಾಜ್ಯಾದಾದ್ಯಂತ ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಪರೀಕ್ಷೆ ನಡೆಸಲಾಗಿತ್ತು.
Follow us on Social media