Breaking News

ಮಂಗಳೂರು : ಬಜ್ಪೆ 5 ವರ್ಷಗಳ ಹಿಂದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು : ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ಸಜೀಪ ಮುನ್ನೂರು ಗ್ರಾಮದ ನಿವಾಸಿ ಜಾಕೀರ್ ಹುಸೈನ್ (29) ಎಂದು ಗುರುತಿಸಲಾಗಿದೆ.

ಸುಮಾರು 5 ವರ್ಷಗಳ ಹಿಂದೆ ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ . ಇದಲ್ಲದೆ ಈತನ ವಿರುದ್ಧ ಮಂಗಳೂರಿನ ಮುಲ್ಕಿ ಠಾಣೆಯಲ್ಲಿ ಕೊಲೆ ಮತ್ತು ದರೋಡೆ ಸೇರಿ ಒಟ್ಟು 3 ಪ್ರಕರಣಗಳು, ಬಂದರು ಠಾಣೆಯಲ್ಲಿ 2 ಪ್ರಕರಣಗಳು, ಪಾಂಡೇಶ್ವರ ಠಾಣೆಯಲ್ಲಿ 2 ಪ್ರಕರಣಗಳು, ಮೂಡಬಿದ್ರೆ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿರುತ್ತವೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×