Breaking News

Breaking News ಮಂಗಳೂರು : ಎಲೆಕ್ಟ್ರಿಕ್‌ ದ್ವಿಚಕ್ರ ವಾಹನ ಶೋರೂಂ ನಲ್ಲಿ ಭಾರೀ ಬೆಂಕಿ- ಅಗ್ನಿ ನಂದಿಸಲು ಹರಸಾಹಸ

ಮಂಗಳೂರು: ಎಲೆಕ್ಟ್ರಿಕ್‌ ದ್ವಿಚಕ್ರ ವಾಹನದ ಶೋ ರೂಂನಲ್ಲಿ ಭಾರಿ ಬೆಂಕಿ ಆಕಸ್ಮಿಕ ಸಂಭವಿಸಿದ ಘಟನೆ ಮಂಗಳೂರು ನಗರದ ನಾಗುರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ನಾಗುರಿಯಲ್ಲಿರುವ ಪ್ರಶಾಂತ್‌ ಮಾಲಕತ್ವದ ಓಕಿನವ ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಮ್‌ನಲ್ಲಿ ಇಂದು ಬೆಳಗ್ಗೆ ಏಕಾಏಕಿ ಬೆಂಕಿ ಅವಘಡ ಸಂಭವಿಸಿದೆ. ಈ ವೇಳೆ ಶೋರೂಂನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಹಲವು ವಾಹನಗಳು ಬೆಂಕಿಗಾಹುತಿಯಾಗಿವೆ.

ಘಟನೆಯಲ್ಲಿ ಯಾವುದೇ ಸಾವು-ನೋವು ಉಂಟಾಗಿಲ್ಲ. ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ದಳ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×