ಬಂಟ್ವಾಳ: ಬೃಹತ್ ಗಾತ್ರದ ಮರವೊಂದು ಕಾರಿನ ಮೇಲೆ ಉರುಳಿ ಬಿದಿದ್ದು ಚಾಲಕನ ಸಮಯ ಪ್ರಜ್ಞೆಯಿಂದ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ ಲಕ್ಷಣಕಟ್ಟೆ ಎಂಬಲ್ಲಿ ನಡೆದಿದೆ.ಮರ ಧರೆಗೆ ಉರುಳುತ್ತಿದ್ದಂತೆ ಕಾರು ಚಾಲಕ ಸಮಯ ಪ್ರಜ್ಞೆ ಮೆರೆದಿದ್ದು ಕಾರನ್ನು ಚಾಲಕ ಹಿಂದಕ್ಕೆ ಚಲಾಯಿಸಿದ್ದರಿಂದ ಭಾರೀ ಅವಘಡ ತಪ್ಪಿದೆ. ಕಾರಿನಲ್ಲಿ ಮೂವರು ಮಹಿಳೆಯರು ಮತ್ತು ಚಾಲಕ ಇದ್ದರು. ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸಜಿಪನಡುನಿಂದ ನೇತ್ರಾವತಿ ನದಿ ಸಂಪರ್ಕಿಸುವ ರಸ್ತೆಯಲ್ಲಿರುವ ಲಕ್ಷಣ ಕಟ್ಟೆ ಎಂಬಲ್ಲಿನ ಕಟ್ಟೆಯಲ್ಲಿದ್ದ ಈ ಮರದ ಕೊಂಬೆಯೊಂದು ಕೆಲವು ದಿನಗಳ ಹಿಂದೆ ಬಿದ್ದಿದ್ದು, ಇಂದು ಮರ ಉರುಳಿ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

