Breaking News

ಮಂಗಳೂರು: ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ

ಮಂಗಳೂರು : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಏಕ ಬಳಕೆಯ ಪ್ಲಾಸ್ಟಿಕ್(ಎಸ್.ಯು.ಪಿ) ವಸ್ತುಗಳ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ಸೂಚನೆ ಮತ್ತು ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ(ತಿದ್ದುಪಡಿ)ನಿಯಮಗಳ ಅನುಸರಣೆಯನ್ನು ಬಿಡುಗಡೆಗೊಳಿಸಿದೆ.

  • ವಿವರ ಇಂತಿದೆ:
    ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್ ಗಳು, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲಾಸ್ಟಿಕ್ ಫ್ಲೆಕ್ಸ್, ಪ್ಲಾಸ್ಟಿಕ್ ಪ್ಲೇಟ್‍ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್‍ಗಳು, ಪ್ಲಾಸ್ಟಿಕ್ ಸ್ಪೂನ್‍ಗಳು, ಅಂಟಿಕೊಳ್ಳುವ ಫಿಲ್ಮ್‍ಗಳು, ಡೈನಿಂಗ್ ಟೇಬಲ್‍ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆಗಳು, ಸ್ಟ್ರಾಗಳು, ಥರ್ಮಾಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳನ್ನು ನಿಷೇಧಿಸಲಾಗಿದೆ.
    ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ,  ನವದೆಹಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳು, 2021 ರಲ್ಲಿ ಮೇಲಿನ ನಿಷೇಧಿತ ಉತ್ಪನ್ನಗಳ ಜೊತೆಗೆ ಕೆಳಗಿನ ಹೆಚ್ಚುವರಿಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳನ್ನು 1ನೇ ಜುಲೈ 2022 ರಿಂದಜಾರಿಗೆ ಬರುವಂತೆನಿಷೇಧಿಸಿ ದಿನಾಂಕ 12ನೇ ಆಗಸ್ಟ್, 2021 ರಂದುಅಧಿಸೂಚನೆ ಯನ್ನು ಹೊರಡಿಸಿದೆ.ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆನಿಯಮಗಳು, 2016 ರ ನಿಯಮ 4(2) ರ ಪ್ರಕಾರ (ತಿದ್ದುಪಡಿದಂತೆ), “ಪಾಲಿಸ್ಟೈರೀನ್ ಮತ್ತು ವಿಸ್ತರಿತ ಪಾಲಿಸ್ಟೈರೀನ್ ಸೇರಿದಂತೆ ಕೆಳಗಿನ ಏಕ ಬಳಕೆಯ ಪ್ಲಾಸ್ಟಿಕ್ (SUP)ತಯಾರಿಕೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಜುಲೈ 1, 2022 ರಿಂದಜಾರಿಗೆ ಬರುವಂತೆನಿಷೇಧಿಸಲಾಗಿದೆ.
    (ಎ) ಪ್ಲಾಸ್ಟಿಕ್ ಸ್ಟಿಕ್‍ಗಳೊಂದಿಗೆ ಇಯರ್ ಬಡ್‍ಗಳು, ಬಲೂನ್‍ಗಳಿಗೆ ಬಳಸುವ ಪ್ಲಾಸ್ಟಿಕ್ ಸ್ಟಿಕ್‍ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕ್ಯಾಂಡಿ ಸ್ಟಿಕ್‍ಗಳು, ಪ್ಲಾಸ್ಟಿಕ್ ಐಸ್‍ಕ್ರೀಮ್ ಸ್ಟಿಕ್‍ಗಳು, ಅಲಂಕಾರಕ್ಕಾಗಿಬಳಸುವ ಪಾಲಿಸ್ಟೈರೀನ್ [ಥರ್ಮಾಕೋಲ್].(ಬಿ)ಪ್ಲಾಸ್ಟಿಕ್ ಪ್ಲೇಟ್‍ಗಳು, ಪ್ಲಾಸ್ಟಿಕ್ ಕಪ್‍ಗಳು ಮತ್ತು ಲೋಟಗಳು, ಫೋರ್ಕ್‍ಗಳು, ಪ್ಲಾಸ್ಟಿಕ್ ಚಮಚಗಳು, ಪ್ಲಾಸ್ಟಿಕ್ ಚಾಕುಗಳು, ಪ್ಲಾಸ್ಟಿಕ್ ಟ್ರೇಗಳಂತಹ ಕಟ್ಲರಿಗಳು, ಸ್ವೀಟ್ ಬಾಕ್ಸ್‍ಗಳ ಸುತ್ತ ಸುತ್ತುವಅಥವಾ ಪ್ಯಾಕಿಂಗ್ ಫಿಲ್ಮ್‍ಗಳು, ಆಮಂತ್ರಣ ಪತ್ರಗಳು ಮತ್ತು ಸಿಗರೇಟ್ ಪ್ಯಾಕೆಟ್‍ಗಳು, 100 ಮೈಕ್ರಾನ್‍ಗಿಂತಕಡಿಮೆದಪ್ಪದಪ್ಲಾಸ್ಟಿಕ್ ಅಥವಾ Pಗಿಅ ಬ್ಯಾನರ್‍ಗಳು, ಪ್ಲಾಸ್ಟಿಕ್ ಸ್ಟಿರರ್‍ಗಳು.ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ(ಒoಇಈ ಮತ್ತು ಅಅ) ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿದ ಟೈಮ್‍ಲೈನ್‍ಗಳ ಪ್ರಕಾರಮೇಲಿನ ಎಲ್ಲಾವಸ್ತುಗಳ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ವ್ಯಾಪಾರಿಗಳು, ಅಂಗಡಿಮಾಲೀಕರುಗಳು, ಇ-ಕಾಮರ್ಸ್ ಕಂಪನಿಗಳು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು (ಮಾಲ್‍ಗಳು/ಮಾರುಕಟ್ಟೆ ಸ್ಥಳ/ಶಾಪಿಂಗ್ ಕೇಂದ್ರಗಳು/ಸಿನಿಮಾ ಮನೆಗಳು/ಪ್ರವಾಸೋದ್ಯಮ ಸ್ಥಳಗಳು/ ಶಾಲೆಗಳು/ ಕಾಲೇಜುಗಳು, ಕಛೇರಿ ಸಂಕೀರ್ಣಗಳು/ಆಸ್ಪತ್ರೆಗಳು, ಇತರೆ ಸಂಸ್ಥೆಗಳು ಮತ್ತು ಸಾಮಾನ್ಯ ಸಾರ್ವಜನಿಕರಿಗೆ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಮತ್ತು ಬಳಕೆಯನ್ನು ನಿಲ್ಲಿಸುವಂತೆತಿಳಿಸಲು ಈ ಸೂಚನೆಯನ್ನು ನೀಡಲಾಗಿದೆ.ಇದಲ್ಲದೆ, ಜೂನ್ 30, 2022 ರೊಳಗೆ ಮೇಲೆ ತಿಳಿಸಲಾದ SUP ವಸ್ತುಗಳÀ ಶೂನ್ಯ ದಾಸ್ತಾನುಗಳನ್ನು ಖಚಿತಪಡಿಸಿಕೊಳ್ಳಲು ಸಂಬಂಧಿಸಿದ ಘಟಕಗಳಿಂದ ಅಗತ್ಯಕ್ರಮವನ್ನು ತೆಗೆದುಕೊಳ್ಳಬೇಕು.ಎಲ್ಲಾಇ-ಕಾಮರ್ಸ್‍ಕಂಪನಿಗಳ ವೆಬ್‍ಸೈಟ್‍ನಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ (SUP)ವಸ್ತುಗಳ ಮಾರಾಟ ಮತ್ತು ಪ್ರದರ್ಶನ/ ಜಾಹೀರಾತುಗಳನ್ನು ಕೂಡಜುಲೈ 1, 2022 ರಿಂದಜಾರಿಗೆ ಬರುವಂತೆ ನಿಷೇಧಿಸಲಾಗಿದೆ.ಮೇಲಿನ ಆದೇಶವನ್ನು ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳಾದಮಾಲ್‍ಗಳು / ಮಾರುಕಟ್ಟೆ ಸ್ಥಳ / ಶಾಪಿಂಗ್ ಕೇಂದ್ರಗಳು / ಸಿನಿಮಾ ಮನೆಗಳು / ಪ್ರವಾಸಿ ಸ್ಥಳಗಳು/ಧಾರ್ಮಿಕ ಸ್ಥಳಗಳು / ಶಾಲೆಗಳು / ಕಾಲೇಜುಗಳು / ಕಚೇರಿಗಳು, ಆಸ್ಪತ್ರೆಗಳು ಮತ್ತುಇತರ ಸಂಸ್ಥೆಗಳು ಉಲ್ಲಂಘಿಸಿದರೆಪರಿಸರ (ಸಂರಕ್ಷಣೆ) ಕಾಯ್ದೆ, 1986 ರಡಿಯಲ್ಲಿನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳ ವಶಪಡಿಸಿಕೊಳ್ಳುವ ಮತ್ತು ಮುಚ್ಚುವ ಆದೇಶವನ್ನು ನೀಡಲಾಗುದುವು ಹಾಗೂ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಹೊರಡಿಸಿದ ಮಾರ್ಗಸೂಚಿಯ ಪ್ರಕಾರ ಪರಿಸರ ಪರಿಹಾರವನ್ನು ಪ್ರತಿಟನ್‍ಗೆರೂ 5,000/- ವನ್ನು ದಂಡ ವಿಧಿಸಲಾಗುವುದು ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಕೆ. ಕೀರ್ತಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×