ಬೆಂಗಳೂರು : ಸುಶಿಕ್ಷಿತ ಸಮಾಜ ನಿರ್ಮಾಣ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಶಿಕ್ಷಣಕ್ಕೆ ಹಿಂದಿನಿಂದಲೂ ಆದ್ಯತೆ ನೀಡುವ ಪ್ರವೃತ್ತಿ ನಮ್ಮದು. ಶಿಕ್ಷಣ, ಆರೋಗ್ಯ ಮೊದಲಾದವುಗಳು ನಮ್ಮ ಸರ್ಕಾರದ ಆದ್ಯತಾ ಕ್ಷೇತ್ರಗಳಾಗಿವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಉನ್ನತ ಶಿಕ್ಷಣ ಇಲಾಖೆಯ ಕೇಂದ್ರ ಕಚೇರಿಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಹಾಗೂ ಮೈತ್ರಿ ಸಹಾಯವಾಣಿ, ವಿಜಯಿಭವ-ಯೂಟ್ಯೂಬ್ ಚಾನಲ್ ಹಾಗೂ ಖಾಸಗಿ ಅನುದಾನಿತ ಕಾಲೇಜುಗಳ ಪೋರ್ಟಲ್‌ಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಅತ್ಯಂತ ಸಂತೋಷದಿಂದ ಕಾಲೇಜು ಶಿಕ್ಷಣ ಇಲಾಖೆಯ ನೂತನ ಕಟ್ಟಡವನ್ನು ಉದ್ಘಾಟಿಸಿದ್ದೇನೆ. ಶಿಕ್ಷಣ ಜಗತ್ತನ್ನೇ ಬದಲಾಯಿಸಬಲ್ಲ ಪ್ರಬಲ ಅಸ್ತ್ರ ಎಂದು ನೆಲ್ಸನ್ ಮಂಡೇಲಾ ಹೇಳಿದ್ದಾರೆ. ಆದ್ದರಿಂದ ನಮ್ಮ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದರು.
Source : UNI
Follow us on Social media