ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರವೂ (ಜುಲೈ 7 ) ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.ನಿರಂತರ ಮಳೆಯಿಂದ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಗುರುವಾರ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿರುವುದರಿಂದ ಮತ್ತು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳಿಗೆ ಗುರುವಾರವೂ ರಜೆ ಘೋಷಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Follow us on Social media