ಕಡಬ: ಟಾಟಾ ಏಸ್ ಹಾಗೂ ರಿಕ್ಷಾ ನಡುವೆ ಅಪಘಾತ ಸಂಭವಿಸಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಪದವು ಸಮೀಪದ ಎರ್ಮಾಳ ಎಂಬಲ್ಲಿ ಶುಕ್ರವಾರ ನಡೆದಿದೆ.
ಗಾಯಾಳುವನ್ನು ಹರೀಶ್ ಎಂದು ಗುರುತಿಸಲಾಗಿದೆ.
ಕುಂತೂರು ಪದವು ಸಮೀಪದ ಎರ್ಮಾಳ ಎಂಬಲ್ಲಿ ಈ ಘಟನೆ ಸಂಭವಿಸಿದ್ದು,
ಗಂಭೀರ ಗಾಯಗೊಂಡ ರಿಕ್ಷಾ ಚಾಲಕನನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow us on Social media