ಉಡುಪಿ : ಪಾದಚಾರಿಯ ಮೇಲೆ ಬೈಕ್ ಚಲಾಯಿಸಿ ಸಾವಿಗೆ ಕಾರಣರಾದ ಆರೋಪಿಗೆ ಕೋರ್ಟ್ ಶಿಕ್ಷೆ ವಿಧಿಸಿ ಆದೇಶ ನೀಡಿದೆ. ನಗರದ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ ತೀರ್ಪು ನೀಡಿದೆ .2018ರ ಡಿಸೆಂಬರ್ 17ರಂದು ಅಪರಾಹ್ನ 3.50ರ ಸುಮಾರಿಗೆ ಉಪ್ಪೂರು ಮೂಡುಅಮ್ಮುಂಜೆಯ ಆಶಿಶ್ ಶೆಟ್ಟಿ ಎಂಬಾತ ಉಡುಪಿ ಪುತ್ತೂರು ಗ್ರಾಮದ ಜಂಕ್ಷನ್ ಬಸ್ನಿಲ್ದಾಣದ ಬಳಿ ದುಡುಕು, ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆ ಯಿಂದ ಬೈಕ್ ನಲ್ಲಿ ತೆರಳುತ್ತಿದ್ದ. ಈ ವೇಳೆ ರಸ್ತೆ ಬದಿ ನಿಂತಿದ್ದ ನಾಗೇಶ್ ಡಿ ಪ್ರಭು ಎಂಬವರಿಗೆ ಡಿಕ್ಕಿಯಾಗಿದೆ. ಪರಿಣಾಮ ನಾಗೇಶ್ ಡಿ ಪ್ರಭು ಅವರು ರಸ್ತೆಗೆ ಎಸೆಯಲ್ಪಟ್ಟು, ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ತೀವ್ರಗಾಯಗೊಂಡು ಮೃತಪಟ್ಟಿದ್ದರು. ಕಾರಣ, ಉಡುಪಿ ಸಂಚಾರ ಠಾಣೆಯ ಪೊಲೀಸ್ ವೃತ್ತ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.praಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆರೋಪಿ ಆಶಿಶ್ ಶೆಟ್ಟಿಗೆ 2 ವರ್ಷ ಕಾರಾಗೃಹ ವಾಸದ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ, ತೀರ್ಪು ನೀಡಿದ್ದಾರೆ.
Follow us on Social mediaAbout the author
Related Posts
August 2, 2023