ಮುಂಬೈ: ಮುಂಬೈನಲ್ಲಿ ಶಾಲೆಯ ಲಿಫ್ಟ್ ನಲ್ಲಿ ಸಿಲುಕಿ 26 ವರ್ಷದ ಶಿಕ್ಷಕಿ ಸಾವನ್ನಪ್ಪಿದ್ದಾರೆ. ಉತ್ತರ ಮುಂಬೈನ ಉಪನಗರವಾದ ಮಲಾಡ್‌ನ ಚಿಂಚೋಲಿ ಬಂದರ್‌ನಲ್ಲಿರುವ ಸೇಂಟ್ ಮೇರಿಸ್ ಇಂಗ್ಲಿಷ್ ಹೈಸ್ಕೂಲ್‌ನಲ್ಲಿ ಶುಕ್ರವಾರ ಈ ಘಟನೆ ವರದಿಯಾಗಿದೆ.
ಶಿಕ್ಷಕಿ ಜೆನೆಲ್ ಫೆರ್ನಾಂಡಿಸ್ ಅವರು ಮಧ್ಯಾಹ್ನ 1 ಗಂಟೆ ಸುಮಾರಿಗೆ ಎರಡನೇ ಮಹಡಿಯಲ್ಲಿರುವ ಸಿಬ್ಬಂದಿ ಕೊಠಡಿಗೆ ತೆರಳಲು ಆರನೇ ಮಹಡಿಯಲ್ಲಿ ಕಾಯುತ್ತಿದ್ದರು. ಲಿಫ್ಟ್ ಗೆ ಪ್ರವೇಶಿಸಿದ ತಕ್ಷಣ ಲಿಫ್ಟ್ ಬಾಗಿಲು ಮುಚ್ಚಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿಕ್ಷಕಿ ಲಿಫ್ಟ್ ಅನ್ನು ಪ್ರವೇಶಿಸಿದಾಗ ಅವರ ಮೇಲೆ ಬಾಗಿಲು ಮುಚ್ಚಿಕೊಳ್ತು, ತಕ್ಷಣ ಲಿಫ್ಟ್ ಚಲಿಸಲು ಪ್ರಾರಂಭಿಸಿತು. ಈ ವೇಳೆ ಶಿಕ್ಷಕಿ ಸಿಲುಕಿಕೊಂಡರು ಎಂದು ವಲಯ 11 ರ ಉಪ ಪೊಲೀಸ್ ಆಯುಕ್ತ ವಿಶಾಲ್ ಠಾಕೂರ್ ಹೇಳಿದರು.ಶಾಲೆಯ ಸಿಬ್ಬಂದಿ ಆಕೆಗೆ ಸಹಾಯ ಮಾಡಲು ಧಾವಿಸಿದರು ಮತ್ತು ಅವರನ್ನು ಹೊರಗೆ ಎಳೆದರು.ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಲ್ಲಿಗೆ ಬರುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದರು.
ಪ್ರಾಥಮಿಕ ತನಿಖೆಯ ಸಮಯದಲ್ಲಿ, ನಾವು ಅಪಘಾತದ ಸಾವಿನ ವರದಿಯನ್ನು ದಾಖಲಿಸಿದ್ದೇವೆ. ಯಾವುದೇ ಸಂಚು ನಡೆದಿದ್ದರೆ ಅದರ ಬಗ್ಗೆಯೂ ತನಿಖೆ ನಡೆಸುತ್ತೇವೆ ಎಂದು ಪೊಲೀಸ್ ಅಧಿಕಾರಿ ಹೇಳಿದರು.
Follow us on Social media