ಮಂಗಳೂರು : ಮಂಗಳೂರು ಬಜ್ಪೆಯಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ಇಂದು (ನವೆಂಬರ್ 1) ಕನ್ನಡ ರಾಜ್ಯೋತ್ಸವದಂದು ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ ಮೂರು ಬಸ್‌ಗಳಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು.
ವಿಮಾನ ನಿಲ್ದಾಣ ಸೇವಾ ಬಸ್ ಗಳು ಮಂಗಳೂರು-ಏರ್ಪೋರ್ಟ್, ಏರ್ಪೋರ್ಟ್- ಮಣಿಪಾಲ ಮಾರ್ಗವಾಗಿ ಕಾರ್ಯಚರಿಸಲಿವೆ.
ಇದರಿಂದ ಸಾವಿರಾರು ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಇನ್ನು ಮುಂದೆ ಪ್ರಯಾಣಿಕರು ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬಹುದು.ಉದ್ಘಾಟನಾ ಸಂದರ್ಭದಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಉಮಾನಾಥ್ ಕೊಟ್ಯಾನ್, ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ್, ಕೆ.ಎಸ್.ಆರ್.ಟಿ.ಸಿ ವಿಭಾಗಿಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಸೇರಿದಂತೆ ಇತರ ಜನಪ್ರತಿನಿಧಿಗಳು, ಸಾರಿಗೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಹಾಜರಿದ್ದರು.
Follow us on Social media