ಬಂಟ್ವಾಳ : ಟಿಪ್ಪರ್ ಲಾರಿಯೊಂದು ಆ್ಯಂಬುಲೆನ್ಸ್ ವಾಹನಕ್ಕೆ ಢಿಕ್ಕಿಯಾದ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪದ ನರಹರಿ ಎಂಬಲ್ಲಿ ರಾತ್ರಿ ವೇಳೆ ನಡೆದಿದೆ.
ಘಟನೆಯಿಂದ ಆ್ಯಂಬುಲೆನ್ಸ್‌ಗೆ ಸ್ವಲ್ಪ ಜಖಂ ಅಗಿರುವುದನ್ನು ಹೊರತುಪಡಿಸಿದರೆ ಬೇರೆ ಯಾವುದೇ ಹಾನಿ ಸಂಭವಿಸಿಲ್ಲ.
ಸುಳ್ಯ ಕೆ.ವಿ.ಜಿ.ಆಸ್ಪತ್ರೆಯ ಆ್ಯಂಬುಲೆನ್ಸ್ ರೋಗಿಯೋರ್ವರನ್ನು ಕೆ.ವಿ.ಜಿ.ಆಸ್ಪತ್ರೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಈ ಘಟನೆ ನಡೆದಿದೆ.ಅಪಘಾತದಲ್ಲಿ ಚಾಲಕ ಸಹಿತ ರೋಗಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಆ್ಯಂಬುಲೆನ್ಸ್ ವಾಹನದ ಮುಂಭಾಗದ ಸಂಪೂರ್ಣ ನಜ್ಜುಗುಜ್ಜಾಗಿದೆ.
ಆ್ಯಂಬುಲೆನ್ಸ್ ವಾಹನದಲ್ಲಿದ್ದ ರೋಗಿಯನ್ನು ಬೇರೆ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ಸಾಗಿಸಲಾಯಿತು.
ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಮೂರ್ತಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow us on Social media