ಚೆನ್ನೈ: ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಐಪಿಎಲ್ನ ಎಲಿಮಿನೇಟರ್ ಪಂದ್ಯದಲ್ಲಿ ಆಕಾಶ್ ಮಧ್ವಾಲ್ ಅವರ ಆಕ್ರಮಣಕಾರಿ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ತಂಡ ಲಖನೌ ಸೂಪರ್ ಜಯಂಟ್ಸ್ ವಿರುದ್ಧ 81 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಕ್ವಾಲಿಫೈಯರ್ 2ಗೆ ಪಂದ್ಯಕ್ಕೆ ಮುಂಬೈ ಎಂಟ್ರಿಕೊಟ್ಟಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರೋಹಿತ್ ಶರ್ಮಾ ಸಾರಥ್ಯದ ಮುಂಬೈ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 182 ರನ್ ಗಳಿಸಿತು.
ಗೆಲುವಿಗೆ 183 ರನ್ ಗಳ ಗುರಿ ಬೆನ್ನಟ್ಟಿದ ಲಕ್ನೋ, ಆರಂಭದಲ್ಲೇ ವಿಕೆಟ್ ಕಳೆದುಕೊಳ್ಳುತ್ತಾ ಪಂದ್ಯದಿಂದಲೇ ಹೊರಬಿತ್ತು. ಅಂತಿಮವಾಗಿ ಲಕ್ನೋ ತನ್ನೇಲ್ಲ ವಿಕೆಟ್ ಕಳೆದುಕೊಂಡು 101 ರನ್ಗಳಿಸಲಷ್ಟೇ ಶಕ್ತವಾಯಿತು. ಮುಂಬೈ ಪರ ಮಾರಕ ಬೌಲಿಂಗ್ ದಾಳಿ ಮಾಡಿದ ಮಧ್ವಾಲ್ ಬರೋಬರಿ 5 ವಿಕೆಟ್ ಪಡೆದರು.
ಮೇ 26ರಂದು ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ವಾಲಿಫೈಯರ್ 2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಗುಜರಾತ್ ಟೈಟನ್ಸ್ ಸವಾಲು ಎದುರಿಸಲಿದೆ.
Follow us on Social media