ಮುಂಬೈ: ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ನಟ ಅಭಿಷೇಕ್ ಬಚ್ಚನ್ ಕೊರೋನಾ ಸೋಂಕು ಕಾಣಿಸಿಕೊಂಡು ಮುಂಬೈಯ ನಾನಾವತಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ನಾನವತಿ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಅಮಿತಾಬ್ ಬಚ್ಚನ್ ಮತ್ತು ಅಭಿಷೇಕ್ ಬಚ್ಚನ್ ಮೊನ್ನೆ 11ರಂದು ಟ್ವಿಟ್ಟರ್ ಮೂಲಕ ಹೇಳಿಕೊಂಡಿದ್ದರು.
ತಂದೆ-ಮಗ ಇಬ್ಬರೂ ಐಸೊಲೇಷನ್ ವಾರ್ಡ್ ನಲ್ಲಿದ್ದು ಆರೋಗ್ಯ ಸ್ಥಿರವಾಗಿದೆ. ಪ್ರಸ್ತುತ ಅವರಿಗೆ ಯಾವುದೇ ಹೆಚ್ಚಿನ ಚಿಕಿತ್ಸೆಯ ಅಗತ್ಯವಿಲ್ಲ. ಮೊದಲ ಹಂತದ ವೈದ್ಯಕೀಯ ಚಿಕಿತ್ಸೆಯೇ ಸಾಕಾಗಿದೆ. ಅದಕ್ಕೆ ಪೂರಕವಾಗಿ ಅವರಿಗೆ ಥೆರಪಿ ನೀಡಲಾಗುತ್ತದೆ, ಇಬ್ಬರ ಬೇರೆಲ್ಲಾ ಚಟುವಟಿಕೆಗಳು ಸಹಜವಾಗಿ ಎಂದಿನಂತಿದೆ ಎಂದು ಆಸ್ಪತ್ರೆಯ ಮೂಲಗಳು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿವೆ.
Follow us on Social media