ವಾಷಿಂಗ್ಟನ್ : ವಿಶ್ವದ ದೊಡ್ಡಣ್ಣ ಅಮೆರಿಕಾದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ ಬರೋಬ್ಬರಿ 2,448 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 75,543ಕ್ಕೆ ಏರಿಕೆಯಾಗಿದೆ.
ಈ ನಡುವೆ ಅಮೆರಿಕಾದಲ್ಲಿ 1,254,750 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ವೈರಸ್ ಮಟ್ಟಹಾಕಲು ಅಲ್ಲಿನ ಅಧಿಕಾರಿಗಳು ಹೆಣಗಾಡುತ್ತಿದ್ದಾರೆ.
1,254,750 ಮಂದಿ ಸೋಂಕಿತರ ಪೈಕಿ 217,250 ಮಂದಿ ವೈರಸ್ ನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆಂದು ವರದಿಗಳು ತಿಳಿಸಿವೆ.
Source : ANI
Follow us on Social media