Breaking News

ಆರೋಗ್ಯ ಸಚಿವ ಶ್ರೀರಾಮುಲುಗು ಕೊರೋನಾ ಪಾಸಿಟಿವ್

ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 

ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ ಎಂದು ಶ್ರೀರಾಮುಲು ಅವರವೇ ಸರಣಿ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ.

ಕೊರೊನ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ.

ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಟ್ವೀಟಿಸಿದ್ದಾರೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×