ಬೆಂಗಳೂರು: ರಾಜ್ಯದಲ್ಲಿಂದು 7 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 425ಕ್ಕೆ ಏರಿಕೆಯಾಗಿದೆ. ಕಲಬರುಗಿಯಲ್ಲಿ 4 ತಿಂಗಳು ಮಗು ಸೇರಿದಂತೆ ಐವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ.
ಕೊರೊನಾ ಸೋಂಕಿತರ ವಿವರ:
ರೋಗಿ 419 : 54 ವರ್ಷದ ಪುರುಷನಾಗಿದ್ದು, ಬೆಂಗಳೂರಿನ ನಿವಾಸಿ. ತೀವ್ರ ಉಸಿರಾಟದ ತೊಂದರೆ. ಸದ್ಯ ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 420 : 28 ವರ್ಷದ ಮಹಿಳೆಯಾಗಿದ್ದು, ಬೆಂಗಳೂರಿನ ನಿವಾಸಿ. ರೋಗಿ ನಂಬರ್ 208ರ ಜೊತೆ ಸಂಪರ್ಕದಲ್ಲಿದ್ದರು. ಸದ್ಯ ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 421 : 46 ವರ್ಷದ ಮಹಿಳೆಯಾಗಿದ್ದು, ಕಲಬುರಗಿಯ ನಿವಾಸಿ. ರೋಗಿ ನಂಬರ್ 222ರ ಜೊತೆ ಸಂಪರ್ಕದಲ್ಲಿದ್ದರು. ಸದ್ಯ ಕಲಬುರಗಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 422 : 57 ವರ್ಷದ ಪುರುಷನಾಗಿದ್ದು, ಕಲಬುರಗಿಯ ನಿವಾಸಿ. ತೀವ್ರ ಉಸಿರಾಟದ ತೊಂದರೆಯೊಂದ ದಾಖಲು. ಸದ್ಯ ಕಲಬುರಗಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 423 : 35 ವರ್ಷದ ಮಹಿಳೆಯಾಗಿದ್ದು, ನಿವಾಸಿ. ರೋಗಿ ನಂಬರ್ 329ರ ಜೊತೆ ಸಂಪರ್ಕದಲ್ಲಿದ್ದರು. ಸದ್ಯ ಕಲಬುರಗಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 424 : ಕಲಬುರಗಿಯ 4 ತಿಂಗಳ ಹೆಣ್ಣು ಮಗು. ನಿವಾಸಿ. ರೋಗಿ ನಂಬರ್ 329ರ ಜೊತೆ ಸಂಪರ್ಕದಲ್ಲಿತ್ತು. ಸದ್ಯ ಕಲಬುರಗಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿ 425 : 26 ವರ್ಷದ ಮಹಿಳೆಯಾಗಿದ್ದು, ನಿವಾಸಿ. ರೋಗಿ ನಂಬರ್ 329ರ ಜೊತೆ ಸಂಪರ್ಕದಲ್ಲಿದ್ದರು. ರೋಗಿ ನಂಬರ್ 424 ಹೆಣ್ಣು ಮಗುವಿನ ತಾಯಿ. ಸದ್ಯ ಕಲಬುರಗಿಯ ನಿಗದಿತ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಗಳವಾರ 10 ಮಂದಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿತ್ತು. ಇಂದು ಸೋಂಕಿತರ ಸಂಖ್ಯೆ 418ರಿಂದ 425ಕ್ಕೆ ಏರಿಕೆಯಾಗಿದೆ. ಮಂಗಳವಾರ ಕಲಬುರಗಿ, ವಿಜಯಪುರದಲ್ಲಿ ತಲಾ ಮೂವರಿಗೆ, ಮೈಸೂರಿನ ನಂಜನಗೂಡಿನಲ್ಲಿ ಇಬ್ಬರಿಗೆ, ಬೆಳಗಾವಿ ಮತ್ತು ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಒಬ್ಬರಿಗೆ ಸೋಂಕು ತಗುಲಿತ್ತು. ಮಂಗಳವಾರದಿಂದಲೇ ಬಂಟ್ವಾಳಕ್ಕೆ ಸಂಪರ್ಕಿಸುವ ಎಲ್ಲ ಮಾರ್ಗಗಳನ್ನು ಬಂದ್ ಮಾಡಲಾಗಿದ್ದು, ಪಟ್ಟಣದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
Follow us on Social media