ಉಡುಪಿ ಮೇ 16: ಮಹಾರಾಷ್ಟ್ರದಿಂದ ಮೇ 5ರ ಬಳಿಕ ತನ್ನ ಹುಟ್ಟೂರಾದ ಕುಂದಾಪುರ ತಾಲೂಕಿಗೆ ಆಗಮಿಸಿದ ವ್ಯಕ್ತಿಯೊಬ್ಬರು ಅಸ್ವಸ್ಥತೆಗಾಗಿ ಕುಂದಾಪುರದ ಆಸ್ಪತ್ರೆಗೆ ದಾಖಲಾಗಿದ್ದು, ಎರಡು ದಿನಗಳ ಹಿಂದೆ ಮಣಿಪಾಲ ಕೆಎಂಸಿಯಲ್ಲಿ ನಿಧನರಾಗಿದ್ದಾಗಿ ತಿಳಿದುಬಂದಿದೆ.
ಅವರಿಗೆ ಕೊರೋನ ಸೋಂಕಿನ ಶಂಕೆಯ ಹಿನ್ನೆಲೆಯಲ್ಲಿ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅದರ ವರದಿಗಾಗಿ ಕಾಯಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.
ಮುನ್ನೆಚ್ಚರಿಕಾ ಕ್ರಮವಾಗಿ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ನರ್ಸ್ ಹಾಗೂ ಆಸ್ಪತ್ರೆಯ ಸ್ವಚ್ಚತಾ ಸಿಬ್ಬಂದಿಗಳನ್ನು ಕ್ವಾರೈಂಟೇನ್ ಗೆ ಒಳಪಡಿಸಿಲಾಗಿದೆ.
Follow us on Social media