ಆದಿಉಡುಪಿ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡ ಘಟನೆ ಮೂಡುಬೆಟ್ಟುವಿನ ಗೋಪಾಲ ಎಂಬವರ ಮನೆಯಲ್ಲಿ ವರದಿಯಾಗಿದೆ.
ಸಿಲಿಂಡರ್ ಸ್ಫೋಟಗೊಂಡ ತೀವ್ರತೆಗೆ ಮನೆಯ ಪೀಠೋಪಕರಣಗಳು ಸುಟ್ಟು ಹೋಗಿವೆ. ಕಿಟಕಿಯ ಗಾಜುಗಳು ಒಡೆದು ಹೋಗಿದ್ದು, ಅಡುಗೆ ಕೋಣೆಯ ಪಾತ್ರೆ, ಸಾಮಗ್ರಿಗಳು ಚೆಲ್ಲಾಪಿಲ್ಲಿಯಾಗಿವೆಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಸಿಲಿಂಡರ್ ಸ್ಫೋಟಗೊಂಡು ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಕೋಣೆಗೆ ವ್ಯಾಪಿಸಿದೆ. ಅವಘಡ ಸಂಭವಿಸುತ್ತಿದ್ದಂತೆ ಮನೆಯೊಳಗಿದ್ದವರು ಹೊರಗೆ ಓಡಿ ಬಂದಿದ್ದಾರೆ. ಈ ಪೈಕಿ ಸಾವಿತ್ರಿ ಹಾಗೂ ಇನ್ನೊಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
Follow us on Social media