ಉಡುಪಿ : ಉಡುಪಿಯಲ್ಲಿ ಕೊರೊನಾ ವೈರಸ್ ಇನ್ನು ಹತೋಟಿಗೆ ಬಂದಿಲ್ಲ, ಭಕ್ತರು ಮನೆಯಲ್ಲಿ ಇದ್ದುಕೊಂಡೇ ದೇವರಿಗೆ ಪ್ರಾರ್ಥನೆ ಸಲ್ಲಿಸಬೇಕು. ಜುಲೈ 31ರ ತನಕ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಭಕ್ತರು ಹಾಗೂ ಕೃಷ್ಣ ಮಠದ ಸಿಬ್ಬಂದಿಗಳ ಆರೋಗ್ಯದ ಈ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.
ದರ್ಶನ ಆರಂಭಿಸಿದರೆ ಎಲ್ಲೆಡೆಯಿಂದ ಭಕ್ತರು ಬರುತ್ತಾರೆ. ಭಕ್ತರ ಮತ್ತು ಕೃಷ್ಣಮಠದ ಸಿಬ್ಬಂದಿ ಆರೋಗ್ಯ ಮುಖ್ಯ. ಕೃಷ್ಣಮಠದಲ್ಲಿ ಬಹಳ ಹಿಂದಿನಿಂದ ಯತಿಗಳೇ ಪೂಜೆ ಮಾಡಿಕೊಂಡು ಬರುವ ಸಂಪ್ರದಾಯ ಇದೆ ಕೃಷ್ಣ ಮಠದ ಪರಂಪರೆ ಉಳಿಸುವ ನಿಟ್ಟಿನಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಮಠದಲ್ಲಿಯೂ ದೇಶದ ಒಳಿತಿಗಾಗಿ ಪೂಜೆ, ಪ್ರಾರ್ಥನೆ ನಡೆಯಲಿವೆ” ಎಂದರು.
ಈಗ ಜುಲೈ ತಿಂಗಳಿನಲ್ಲಿಯೂ ಸದ್ಯ ಭಕ್ತಾದಿಗಳಿಗೆ ಪ್ರವೇಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ರಾಜ್ಯದ ಹಲವಾರು ದೇವಾಲಯಗಳಲ್ಲಿ ಜುಲೈ 31ರ ತನಕ ಭಕ್ತರಿಗೆ ಪ್ರವೇಶ ನಿರಾಕರಿಸಲಾಗಿದೆ.
Follow us on Social media