ಉಡುಪಿ : ಬಹ್ರೇನ್ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದುವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಮರಾಠಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.ಇನ್ನು ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Follow us on Social media