ಉಳ್ಳಾಲ: ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕೆಗೆ ಪ್ಯಾಂಟ್ ನ ಜಿಪ್ ಓಪನ್ ಮಾಡಿ ಅಸಭ್ಯವಾಗಿ ವರ್ತಿಸಿದ ಕ್ಲೀನರ್ವೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ಮುಂಜಾನೆ ನಡೆದಿದೆ.
ಬಜ್ಪೆ ಕೆಂಜೂರು ನಿವಾಸಿ ಬಸ್ ಕ್ಲೀನರ್ ಮಹಮ್ಮದ್ ಇಮ್ರಾನ್ (26) ಬಂಧಿತ ಆರೋಪಿ.
ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕರ್ತವ್ಯದಲ್ಲಿರುವ ಮಹಿಳಾ ವೈದ್ಯೆಯೊಬ್ಬರು ಬೆಂಗಳೂರಿನಿಂದ ಮಂಗಳೂರಿಗೆ ಐಡಿಯಲ್ ಬಸ್ನಲ್ಲಿ ಪ್ರಯಾಣ ಮಾಡುತ್ತಿದ್ದರು.
ಬಸ್ ಗುರುವಾರ ಮುಂಜಾನೆ ಉಳ್ಳಾಲ ಠಾಣಾ ವ್ಯಾಪ್ತಿಗೆ ತಲುಪಿದಾಗ ಬಸ್ ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ಧ ಎಂಬಾತ ಅಸಭ್ಯವಾಗಿ ವರ್ತಿಸುತ್ತಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಮಹಿಳಾ ವೈದ್ಯೆ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿದ ಉಳ್ಳಾಲ ಪೊಲೀಸರು ಆರೋಪಿ ಮಹಮ್ಮದ್ ಇಮ್ರಾನ್ ಎಂಬಾತನನ್ನು ಬಂಧಿಸಿದ್ದಾರೆ.
Follow us on Social media