ಅಯೋಧ್ಯೆ : ಅಯೋಧ್ಯೆಯ ಐತಿಹಾಸಿಕ ಭವ್ಯ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯು ಬುಧವಾರ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ಇಟ್ಟಿಗೆ ಇರಿಸುವ ಮೂಲಕ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದ್ದಾರೆ.
ಸಮಸ್ತ ದೇಶದ ಪ್ರತಿನಿಧಿಯಾಗಿ, ನರೇಂದ್ರ ಮೋದಿ ಹೆಸರಿನ ನಾನು ದೇಶದ ಪ್ರತಿನಿಧಿಯಾಗಿ ಭೂಮಿಪೂಜೆ ಮಾಡುತ್ತೇನೆ ಎಂದು ಮೋದಿ ಸಂಕಲ್ಪ ಮಾಡಿದರು.
ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಆಹ್ವಾನಿತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಸುಮಾರು 161 ಅಡಿ ಎತ್ತರದ ಭವ್ಯ ರಾಮ ಮಂದಿರದ ನಿರ್ಮಾಣ ಕಾಮಗಾರಿಯು ಸುಮಾರು 3 ರಿಂದ 3.5 ವರ್ಷಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ಭೂ ವ್ಯಾಜ್ಯ ಪ್ರಕರಣದಲ್ಲಿ ನವೆಂಬರ್ನಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದ ನಂತರ ದೇಗುಲದ ಮೂಲ ಯೋಜನೆಯನ್ನು ಬದಲಿಸಿ ಹೊಸ ಯೋಜನೆ ಸಿದ್ಧಪಡಿಸಲಾಗಿದೆ.
”ಈ ಮೊದಲು ಸುಮಾರು 141 ಅಡಿ ಎತ್ತರದ ರಾಮಮಂದಿರ ನಿರ್ಮಾಣಕ್ಕೆ ನಿರ್ಧರಿಸಲಾಗಿದ್ದು, ಇತ್ತೀಚೆಗೆ ಇದನ್ನು 20 ಅಡಿ ಹೆಚ್ಚಳ ಮಾಡಿ 161 ಅಡಿ ಎತ್ತರದ ಮಂದಿರ ನಿರ್ಮಿಸಲಾಗುವುದು” ಎಂದು ದೇವಾಲಯದ ಮುಖ್ಯ ವಾಸ್ತುಶಿಲ್ಪಿ ಸಿ.ಸೊಂಪುರ ಅವರ ಪುತ್ರ ಹಾಗೂ ವಾಸ್ತುಶಿಲ್ಪಿ ನಿಖಿಲ್ ಸೊಂಪುರ ತಿಳಿಸಿದ್ದರು.
”ಹಾಗೆಯೇ ರಾಮಮಂದಿರಕ್ಕೆ ಬರುವ ಭಕ್ತಾಧಿಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುವ ಸಾಧ್ಯತೆ ಇರುವ ಹಿನ್ನೆಲೆ ಎತ್ತರವನ್ನು ಹೆಚ್ಚಿಸಲಾಗಿದೆ” ಎಂದು ತಿಳಿಸಿದ್ದರು.
Follow us on Social media