ಕಲಬುರಗಿ : ಅಪ್ರಾಪ್ತ ಬಾಲಕಿಯನ್ನು ರೇಪ್ ಮಾಡಿ ಕೊಲೆ ಮಾಡಿದ್ದ ಆರೋಪಿ ಅಪ್ರಾಪ್ತ ಬಾಲಕನನ್ನು ಕಳೆದ 24 ಗಂಟೆಗಳಲ್ಲೇ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಳ್ಳಿ ಗ್ರಾಮದ ಹೊರವಲಯದಲ್ಲಿ ನಿನ್ನೆ ಸಂಜೆ ಈ ಘಟನೆ ನಡೆದಿತ್ತು. ಕಳೆದ 24 ಗಂಟೆಯಲ್ಲೇ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು ಬಾಲಕಿ ವಾಸವಿದ್ದ ಗ್ರಾಮದ 16 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಎಸ್ ಪಿ ಇಶಾ ಪಂತ್ ಅವರು ಪ್ರಕರಣ ಭೇದಿಸಿದ ಸಿಬ್ಬಂದಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ಬಂಧಿತ ಆರೋಪಿಯ ವಿಚಾರಣೆ ನಡೆಸಲಾಗುತ್ತಿದ್ದು ಶೀಘ್ರದಲ್ಲೇ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಅಫಜಲಪುರ ತಾಲೂಕಿನ 15 ವರ್ಷದ ಬಾಲಕಿ ಕೊರಳ್ಳ ಗ್ರಾಮದ ಸಂಬಂಧಿಕರ ಮನೆಯಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಸಾಯಂಕಾಲ ವೇಳೆ ಬಹಿರ್ದೆಸೆಗೆಂದು ಗದ್ದೆಯ ಕಡೆಗೆ ಹೋಗಿದ್ದ ವೇಳೆ ದುಷ್ಕರ್ಮಿ ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿ ಕೊಲೆ ಮಾಡಿರಬಹುದು. ಗ್ರಾಮದ ಹೊರವಲಯದಲ್ಲಿರುವ ಕಬ್ಬಿನ ಗದ್ದೆಯಲ್ಲಿ ಆಕೆಯ ಶವ ಪತ್ತೆಯಾಗಿತ್ತು.
Follow us on Social media