ಕಲಬುರಗಿ: ಸೂರ್ಯ ನಗರಿ ಕಲಬುರಗಿ ಗ್ರಾಮೀಣ ಶಾಸಕರಿಗೆ ಕೊರೊನಾ ಸೋಂಕು ತಗುಲಿದೆ.
ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಅವರಿಗೆ ಕೊರೊನಾ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಿಂದ ದೃಢಪಟ್ಟಿದೆ. ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಶಾಸಕರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಾನು ಕೊರೊನಾ ಟೆಸ್ಟ್ ಮಾಡಿಸಿದ್ದು, ಪಾಸಿಟಿವ್ ಬಂದಿದೆ. ನಾನು ಆರೋಗ್ಯವಾಗಿದ್ದು, ಕೆಲವು ಲಕ್ಷಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದೇನೆ. ಆದ್ದರಿಂದ ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಹೋಂ ಕ್ವಾರಂಟೈನ್ ಗೆ ಒಳಗಾಗಿ ಕೋವಿಡ್ -19 ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಕಾರ್ಯಕರ್ತರು, ಬೆಂಬಲಿಗರಲ್ಲಿ ಶಾಸಕ ಬಸವರಾಜ ಮತ್ತಿಮೂಡ ಅವರು ಮನವಿ ಮಾಡಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್ ನ ಮುಖ್ಯ ಸಚೇತಕ ಹಾಗೂ ಕಲಬುರಗಿ ಜಿಲ್ಲೆಯ ಜೇವರ್ಗಿ ಕ್ಷೇತ್ರದ ಶಾಸಕ ಡಾ.ಅಜಯ್ ಸಿಂಗ್ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು. ಕಲಬುರಗಿಯಲ್ಲಿ ಕೊರೊನಾ ದಿನೇ ದಿನೇ ತನ್ನ ವ್ಯಾಪ್ತಿ ಹೆಚ್ಚಿಸಿಕೊಳ್ಳುವ ಮೂಲಕ ರಾಜಕೀಯ ಧುರೀಣರಿಗೂ ವಕ್ಕರಿಸಿಕೊಳ್ಳುತ್ತಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
Follow us on Social media