ರಾಂಚಿ: 1999ರ ಜಾರ್ಖಂಡ್ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ.
ಸುದೀರ್ಘ ವಿಚಾರಣೆ ಬಳಿಕ ಜಾರ್ಖಂಡ್ ಸಿಬಿಐ ವಿಶೇಷ ನ್ಯಾಯಾಲಯವು ಶಿಕ್ಷೆ ಪ್ರಮಾಣ ಪ್ರಕಟಿಸಿದ್ದು, ಮೂರು ವರ್ಷಗಳ ಜೈಲುಶಿಕ್ಷೆಯನ್ನು ವಿಧಿಸಿದೆ. ದಿಲೀಪ್ ರೇ ವಿರುದ್ಧದ ಆರೋಪ ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಕಳೆದ ವಾರ ಕೋರ್ಟ್ ಇವರನ್ನು ಅಪರಾಧಿ ಎಂದು ಘೋಷಿಸಿತ್ತು. ಆದರೆ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿರಲಿಲ್ಲ. ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗಿದ್ದು, ಮೂರು ವರ್ಷಶಿಕ್ಷೆ ವಿಧಿಸಲಾಗಿದೆ.
ಇನ್ನು ದಿಲೀಪ್ ರೇ ಅವರು, ಅಟಲ್ ಬಿಹಾರಿ ವಾಜಪೇಯಿಯವರ ಸರ್ಕಾರದಲ್ಲಿ ಕಲ್ಲಿದ್ದಲು ಇಲಾಖೆಯ ರಾಜ್ಯ ಸಚಿವರಾಗಿದ್ದರು. ದಿಲೀಪ್ ರೇ ಜತೆ ಕಲ್ಲಿದ್ದಲು ಸಚಿವಾಲಯದ ಇಬ್ಬರು ಹಿರಿಯ ಅಧಿಕಾರಿಗಳಾದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ್ ಗೌತಮ್, ಕ್ಯಾಸ್ಪ್ಯಾನ್ ಟೆಕ್ನಾಲಜೀಸ್ ಲಿಮಿಟೆಡ್ (ಸಿಟಿಎಲ್)ನ ನಿರ್ದೇಶಕ ಮಹೇಂದ್ರ ಕುಮಾರ್ ಅಗರ್ವಾಲ್ ಅವರಿಗೂ ಮೂರು ವರ್ಷ ಶಿಕ್ಷೆ ವಿಧಿಸಲಾಗಿದೆ.
ಜಾರ್ಖಂಡ್ನ ಗಿರಿದಿಹ್ನಲ್ಲಿರುವ ಬ್ರಹ್ಮದಿಹಾ ಕಲ್ಲಿದ್ದಲು ಬ್ಯಾಕ್ ಅನ್ನು 1999ರಲ್ಲಿ ಕ್ಯಾಸ್ಪ್ಯಾನ್ ಟೆಕ್ನಾಲಜೀರ್ ಲಿಮೀಟಿಚ್ಗೆ ಅಕ್ರಮವಾಗಿ ಹಂಚಿಕೆ ಮಾಡಿರುವ ಪ್ರಕರಣ ಇದಾಗಿದೆ. ಜಾರ್ಖಂಡ್ ಕಲ್ಲಿದ್ದಲು ಗಣಿ ಮತ್ತು ನಿಕ್ಷೇಪಗಳ ಹಂಚಿಕೆಗೆ ಸಂಬಂಧಿಸಿದಂತೆ ಭಾರೀ ಪ್ರಮಾಣದ ಅಕ್ರಮ ಮತ್ತು ಅವ್ಯವಹಾರ ನಡೆದಿತ್ತು ಎಂದು ಆರೋಪಿಸಲಾಗಿತ್ತು.
Follow us on Social media