ಬೆಂಗಳೂರು: ರಾಜ್ಯ ಸರ್ಕಾರದ ಬಹುದಿನಗಳ ಹೋರಾಟದ ಫಲವಾಗಿ ಕಳಸಾ ಬಂಡೂರಿ ನಾಲಾ ಯೋಜನೆ ಸಂಬಂಧ ಸಂತಸದ ಸುದ್ದಿ ಹೊರಬಿದ್ದಿದ್ದು, ಅರಣ್ಯ ಇಲಾಖೆಯ ಅನುಮತಿ ನೀಡುವ ಸಂಬಂಧ ಹೊಸದಾಗಿ ಪ್ರಸ್ತಾವನೆ ಸಲ್ಲಿಕೆ ಮಾಡುವಂತೆ ಕೇಂದ್ರ ಸರ್ಕಾರವು ಸೂಚನೆ ನೀಡಿದೆ. ಈ ಸಂಬಂಧ ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.
ಯೋಜನೆಗೆ ಅನು ಮತಿ ನೀಡುವಂತೆ ಈ ಹಿಂದೆ ರಾಜ್ಯ ಸರ್ಕಾರವು ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಕೇಂದ್ರ ಅರಣ್ಯ ಇಲಾಖೆಯು ಕರ್ನಾಟಕ ಮತ್ತು ನೆರೆ ರಾಜ್ಯಗಳ ನಡುವೆ ವಿವಾದ ಇದ್ದ ಕಾರಣ ಪ್ರಸ್ತಾವನೆಯನ್ನು ೨೦೦೩ರಲ್ಲಿ ವಾಪಸ್ ಕಳುಹಿಸಿತ್ತು.
೨೦೧೪ರಲ್ಲಿ ಅರಣ್ಯ ಸಂರಕ್ಷಣಾ ಕಾಯ್ದೆ ತಿದ್ದುಪಡಿ ಮಾಡದ್ದರಿಂದ ಮಾರ್ಗಸೂಚಿಯಲ್ಲಿ ಹಲವು ಬದಲಾವಣೆಗಳನ್ನು ತರಲಾಗಿದೆ ಮತ್ತು ಎರಡು ದಶಕಗಳು ಕಳೆದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹೊಸ ಪ್ರಸ್ತಾವನೆ ಸಲ್ಲಿಕೆ ಮಾಡುವ ಅಗತ್ಯ ಇದೆ. ಹೀಗಾಗಿ ಹೊಸದಾಗಿ ಪ್ರಸ್ತಾವನೆ ಸಲ್ಲಿಸಿದರೆ ಅದನ್ನು ಪರಿಶೀ ಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರದಲ್ಲಿ ತಿಳಿಸಲಾಗಿದೆ.
Follow us on Social media