ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಗುರುವಾರ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಸಂಜೆ 7 ಗಂಟೆಯ ಸುಮಾರಿಗೆ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳವಳ ಪಡುವ ಆಗತ್ಯವಿಲ್ಲ. ಕೆಲವು ನಿಯಮತಿ ಚೆಕ್ ಅಪ್ ಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಗಂಗಾರಾಮ್ ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ. ಕೆಲವು ಚೆಕ್ ಅಪ್ ಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋನಿಯಾ ಗಾಂಧಿ ಅವರಿಗೆ ಕೆಲವು ಪರೀಕ್ಷೆ ಮಾಡಬೇಕಿದೆ. ಈ ಕಾರಣಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ ಎಂದು ಗಂಗಾರಾಮ್ ಆಸ್ಪತ್ರೆಯ ಅಧ್ಯಕ್ಷ ಡಾ. ಡಿಎಸ್ ರಾಣಾ ಅವರು ಹೇಳಿದ್ದಾರೆ.
73 ವರ್ಷದ ಸೋನಿಯಾ ಗಾಂಧಿ ಅವರು ಕಳೆದ ಫೆಬ್ರವರಿಯಲ್ಲಿ ಇದೇ ಆಸ್ಪತ್ರೆಗೆ ದಾಖಲಾಗಿದ್ದರು.
Follow us on Social media