ಕಾಪು : ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಮೆಂಡನ್ ಅವರು ನೇಮಕಗೊಂಡಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಈ ಕುರಿತಾಗಿ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ.
ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಲಾಲಾಜಿ ಮೆಂಡನ್ ಅವರು ಬಿಜೆಪಿ ಪಕ್ಷದ ಸಕ್ರಿಯ ಸದಸ್ಯರಾಗಿದ್ದಾರೆ. ಕಾಪು ಯುವಮೋರ್ಚಾದ ಮೊದಲ ಅಧ್ಯಕ್ಷರಾಗಿದ್ದ ಅವರು ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿಯೂ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ.
ಇವರು ಎರಡನೇ ಬಾರಿ ಶಾಸಕರಾಗಿದ್ದಾಗ ಕೊಂಕಣ್ ರೈಲ್ವೇ ಮಂಡಳಿ ನಿರ್ದೇಶಕರು ಕೂಡಾ ಆಗಿದ್ದರು.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಒಟ್ಟು 24 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿದ್ದು ಈ ಪೈಕಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಲಾಜಿ ಮೆಂಡನ್ ಅವರನ್ನು ಮಾತ್ರ ಆಯ್ಕೆ ಮಾಡಲಾಗಿದೆ.
Follow us on Social media