ಕಾಸರಗೋಡು : ಕಾಸರಗೋಡಿನ ಆದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಯುವತಿಯೊಬ್ಬರು ಮನೆಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ.
ಬಂಟತುಕ್ಕ ಅನ್ನಪಾಡಿ ಚಮಕೊಚ್ಚಿಯ ದಿವಂಗತ ಬುದ್ಧ ನಾಯ್ಕ್-ಲೀಲಾ ದಂಪತಿಯ ಪುತ್ರಿ ಎ.ಬಿ.ದಿವ್ಯಾ (21) ಮೃತರು.
ಬಂಡತುಕದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.
ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಆದೂರು ಪೊಲೀಸರು ಪಂಚನಾಮೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
ಸಾವಿಗೆ ಕಾರಣ ಸ್ಪಷ್ಟವಾಗಿಲ್ಲ. ಆದೂರು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Follow us on Social media